ಕರ್ತವ್ಯ ಲೋಪ: ದೇವಲ ಗಾಣಗಾಪೂರ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಅಮಾನತು

Update: 2020-10-19 06:04 GMT

ಕಲಬುರಗಿ, ಅ.19: ಯಾತ್ರಿ ನಿವಾಸದಲ್ಲಿ ಪ್ರಾರಂಭಿಸಿರುವ ಕಾಳಜಿ ಕೇಂದ್ರದಲ್ಲಿನ ಪ್ರವಾಹ ಸಂತ್ರಸ್ತರಿಗೆ ಊಟ ಮತ್ತು ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ದೇವಲ ಗಾಣಗಾಪೂರ ಗ್ರಾಪಂ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ವಿ. ವಿ. ಜೋತ್ನ್ಯಾ ಆದೇಶ ಹೊರಡಿಸಿದ್ದಾರೆ.

ಅಫ್ಝಲ್ ಪುರ ತಾಲ್ಲೂಕಿನ ದೇವಲ ಗಾಣಗಾಪೂರದ ಯಾತ್ರಿ ನಿವಾಸದಲ್ಲಿ ತೆರೆಯಲಾಗಿರುವ ಪ್ರವಾಹ ಸಂತ್ರಸ್ತರ ಕಾಳಜಿ ಕೇಂದ್ರದಕ್ಕೆ ಭೇಟಿ ನೀಡಿದ ವೇಳೆ ಸಂತ್ರಸ್ತರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಕ್ರಮ ಕೈಗೊಳಲಾಗಿದೆ ಎಂದು ತಿಳಿದುಬಂದಿದೆ.

ಊಟ ಸರಿಯಾಗಿ ನೀಡುತ್ತಿಲ್ಲ, ಅನ್ನದಲ್ಲಿ ಹುಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ ಎಂಬ ಸಾರ್ವಜನಿಕರ ದೂರಿನನ್ವಯ  ಕರ್ತವ್ಯ ಲೋಪ ಎಸಗಿದ ಪಿಡಿಒ ಗುರುನಾಥ ಹರಿದಾಸ ಮತ್ತು ಗ್ರಾಮ ಲೆಕ್ಕಾಧಿಕಾರಿ ಭಾಗ್ಯಶ್ರೀ ಯಳವಾರ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News