ಫಾರುಕ್ ಅಬ್ದುಲ್ಲಾರನ್ನು ವಿಚಾರಣೆ ನಡೆಸಿದ ಈಡಿ

Update: 2020-10-19 08:21 GMT

ಶ್ರೀನಗರ: ಜಮ್ಮು-ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಈಡಿ)ರಾಷ್ಟ್ರೀಯ ಕಾನ್ಫರೆನ್ಸ್ ಪಕ್ಷದ ವರಿಷ್ಠ ಫಾರುಕ್ ಅಬ್ದುಲ್ಲಾರನ್ನು ವಿಚಾರಣೆಗೆ ಒಳಪಡಿಸಿದೆ.

ಫಾರುಕ್ ಅಬ್ದುಲ್ಲಾ ಅವರು ಜಮ್ಮು-ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆಸಿರುವ 43 ಕೋ.ರೂ.ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿ ಈಡಿ ವಿಚಾರಣೆ ನಡೆಸುತ್ತಿದೆ. ಬ್ಯಾಂಕ್ ದಾಖಲೆಗಳ ಆಧಾರದಲ್ಲಿ ಅಬ್ದುಲ್ಲಾರನ್ನು ಸೋಮವಾರ ಶ್ರೀನಗರದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬಿಸಿಸಿಐ 2002ರಿಂದ 2011ರ ತನಕ ಜಮ್ಮು-ಕಾಶ್ಮೀರದಲ್ಲಿ ಕ್ರಿಕೆಟ್ ಬೆಳವಣಿಗೆಗಾಗಿ ಜಮ್ಮು-ಕಾಶ್ಮೀರ ಕ್ರಿಕೆಟ್‌ಸಂಸ್ಥೆಗೆ 113 ಕೋ.ರೂ.(ಅಂದಾಜು)ಅನುದಾನ ನೀಡಿದ್ದು, ಈ ಪೈಕಿ 43.69 ಕೋ.ರೂ.ವನ್ನು ಆರೋಪಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News