×
Ad

ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿಯೇ ವಂಚನೆ: ದೂರು ದಾಖಲು

Update: 2020-10-19 21:37 IST

ಬೆಂಗಳೂರು, ಅ.19: ಪೊಲೀಸ್ ಅಧಿಕಾರಿಗಳ ಹೆಸರು ಹೇಳಿಕೊಂಡು ವಂಚನೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಹಿರಿಯ ಐಪಿಎಸ್ ಪೊಲೀಸ್ ಅಧಿಕಾರಿ ಪಿ.ಹರಿಶೇಖರನ್, ಪೊಲೀಸ್ ಅಧಿಕಾರಿಗಳಾದ ಪ್ರಕಾಶ್ ರಾಠೋಡ್, ಹುಮಾಯೂನ್ ನಾಗ್ತೆ ಎಂಬುವರ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಅಧಿಕಾರಿಗಳ ಸ್ನೇಹಿತರಿಗೆ ಪೇಟಿಎಂ, ಫೋನ್ ಪೇ, ಗೂಗಲ್ ಪೇ ಮುಖಾಂತರ ಹಣ ಕಳಿಸುವಂತೆ ಸಂದೇಶ ಮಾಡಿದ್ದಾರೆ.

ಈ ಕುರಿತು ಅಧಿಕಾರಿಗಳ ಸ್ನೇಹಿತರು ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಪೊಲೀಸ್ ಅಧಿಕಾರಿಗಳು, ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News