×
Ad

ಬಟ್ಲರ್ ಆಕರ್ಷಕ ಅರ್ಧಶತಕ: ಚೆನ್ನೈ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಭರ್ಜರಿ ಗೆಲುವು

Update: 2020-10-19 22:57 IST

ಅಬುಧಾಬಿ: ಜೋಸ್ ಬಟ್ಲರ್ ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 7 ವಿಕೆಟ್ ಗಳ ಗೆಲುವು ಸಾಧಿಸಿದೆ.

ಗೆಲುವಿಗೆ 126 ರನ್ ಗುರಿ ಪಡೆದ ರಾಜಸ್ಥಾನ ರಾಯಲ್ಸ್ 17.3 ಓವರ್ ಗಳಲ್ಲಿ 3 ವಿಕೆಟ್ ನಷ್ಟದಲ್ಲಿ ಗುರಿ ತಲುಪಿತು. ಜೋಸ್ ಬಟ್ಲರ್ 48 ಎಸೆತಗಳಲ್ಲಿ 70 ರನ್ ಹಾಗೂ ನಾಯಕ ಸ್ಟೀವನ್ ಸ್ಮಿತ್ 26 ರನ್ ಬಾರಿಸಿ ತಂಡದ ಗೆಲುವಿಗೆ ನೆರವಾದರು.

ಚೆನ್ನೈ ಪರ ದೀಪಕ್ ಚಾಹರ್ 2, ಹ್ಯಾಝ್ಲೆಹುಡ್ 1 ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. ಆರಂಭಿಕ ಆಟಗಾರ ಸ್ಯಾಮ್ ಕುರ್ರನ್ 22, ನಾಯಕ ಧೋನಿ 28, ರವೀಂದ್ರ ಜಡೇಜ 35 ರನ್ ಬಾರಿಸಿದರು.

ರಾಜಸ್ಥಾನ ರಾಯಲ್ಸ್ ಪರ ಜೋಫ್ರ ಅರ್ಚರ್, ಕಾರ್ತಿಕ್ ತ್ಯಾಗಿ, ಶ್ರೇಯಸ್ ಗೋಪಾಲ್ ಹಾಗೂ ರಾಹುಲ್ ತೆವಾಟಿತ ತಲಾ ಒಂದು ವಿಕೆಟ್ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News