×
Ad

ಕಡಲಕೆರೆಯಲ್ಲಿ ದೋಣಿ ವಿಹಾರಕ್ಕೆ ಚಾಲನೆ

Update: 2020-10-19 23:55 IST

ಮೂಡುಬಿದಿರೆ: ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದಲ್ಲಿ ದೋಣಿ ವಿಹಾರವು ಸೋಮವಾರ ಆರಂಭಗೊಂಡಿತು. ಶಾಸಕ ಉಮಾನಾಥ ಕೋಟ್ಯಾನ್ ದೋಣಿ ವಿಹಾರವನ್ನು ಉದ್ಘಾಟಿಸಿದರು. 

ಬಳಿಕ ಮಾತನಾಡಿದ ಅವರು ಮೂಡುಬಿದಿರೆ ಕಡಲಕೆರೆಯು ಇಲ್ಲಿನ ಜನಾಕರ್ಷಣೆಯ ಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಇದನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲು ಸರಕಾರದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದರು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ರಾಜ್ಯ ಕ್ರಿಶ್ಚನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೋಯ್ಲಸ್ ತಾಕೋಡೆ, ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಸದಸ್ಯ ಮಂಜುನಾಥ ರೈ, ಪುರಸಭಾ ಸದಸ್ಯರಾದ ಪಿ.ಕೆ.ಥೋಮಸ್, ನಾಗರಾಜ ಪೂಜಾರಿ, ಪ್ರಸಾದ್ ಕುಮಾರ್, ಸೌಮ್ಯ ಸಂದೀಪ್ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಸುದೀಪ್, ಮೂಡುಬಿದಿರೆ ರೋಟರಿ ಕ್ಲಬ್  ಟೆಂಪಲ್ ಟೌನ್‍ನ ಅಧ್ಯಕ್ಷ ಬಿ.ಸೀತಾರಾಮ ಆಚಾರ್ಯ,  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್, ಮಂಗಳೂರು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಪಾಶ್ರ್ವನಾಥ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ಕೃಷಿ ವಿಜ್ಞಾನಿ ಡಾ.ಎಲ್.ಸಿ.ಸೋನ್ಸ್, ಹಿರಿಯ ವಕೀಲ ಕೆ.ಆರ್. ಪಂಡಿತ್, ಉಪವಲಯಾರಣ್ಯಾಧಿಕಾರಿಗಳಾದ ಮಂಜುನಾಥ ಗಾಣಿಗ, ಅಶ್ವಿತ್ ಗಟ್ಟಿ, ಪ್ರಿಯಾ ಇನ್ಲೇಂಡ್ ಫಿಶರಿಸ್ ಬೋಟ್ ಸ್ಪೋಟ್ಸ್ ನಿರ್ವಾಹಕ ಡಾ.ಎಂ.ಎಸ್.ನಝೀರ್  ಹಾಗೂ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News