ಯಡಿಯೂರಪ್ಪ ಬಹಳ ದಿನ ಸಿಎಂ ಆಗಿರುವುದಿಲ್ಲ: ಶಾಸಕ ಬಸನಗೌಡ ಪಾಟೀಲ್

Update: 2020-10-20 06:32 GMT

ವಿಜಯಪುರ, ಅ.20: ಬಿ.ಎಸ್.ಯಡಿಯೂರಪ್ಪ ಬಹಳ ದಿನ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವುದಿಲ್ಲ. ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದ 3ನೇ ವಾರ್ಡ್‌ಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಇಲ್ಲಿನ ಹನುಮಂತ ದೇವಸ್ಥಾನದ ಕಂಪೌಂಡ್ ಬಳಿ ಮಂಗಳವಾರ ನಡೆದಿದ್ದು, ಈ ವೇಳೆ ಯತ್ನಾಳ್ ಮಾಡಿದ್ದೆನ್ನಲಾದ ಭಾಷಣದ ವೀಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈಗಗಾಲೇ ಕೇಂದ್ರ ಸರಕಾರಕ್ಕೆ ಯಡಿಯೂರಪ್ಪಸಾಕಾಗಿ ಹೋಗಿದ್ದಾರೆ. ಅವರು ಬಹಳ ದಿನ ಸಿಎಂ ಆಗಿರುವುದಿಲ್ಲ ಎಂದು ಸ್ವಪಕ್ಷೀಯ ಶಾಸಕರೇ ಆಗಿರುವ ಯತ್ನಾಳ್ ಹೇಳಿದ್ದಾರೆ.

ಉತ್ತರ ಕರ್ನಾಟಕದವರೇ 100 ಶಾಸಕರನ್ನು ಗೆಲ್ಲಿಸಿ ವಿಧಾನ ಸೌಧಕ್ಕೆ ಜನತೆ ಕಳುಹಿಸುತ್ತಾರೆ. ಆದರೆ, ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಬರುತ್ತಾರೆ. ಆದರೂ ಅವರಲ್ಲಿ ಒಬ್ಬರು ಮುಖ್ಯಮಂತ್ರಿ ಆಗ್ತಿದ್ದಾರೆ. ಇದು ಸರಿಯಲ್ಲ. ಇನ್ನೇನಿದ್ರೂ ಉತ್ತರ ಕರ್ನಾಟಕದವೇ ಮುಖ್ಯಮಂತ್ರಿ ಆಗೋದು ಪಕ್ಕಾ. ಉತ್ತರ ಕರ್ನಾಟಕದವರನ್ನೇ ಮುಖ್ಯಮಂತ್ರಿ ಮಾಡುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದರು.

ತನ್ನ ಕ್ಷೇತ್ರಕ್ಕೆ ಸಂಬಂಧಿಸಿದ 125 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಕಡಿತ ಮಾಡಿದ್ದಾರೆ. ಈ ವಿಚಾರವಾಗಿ ತನಗೂ ಯಡಿಯೂರಪ್ಪರಿಗೂ ಜಗಳವೇ ಆಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News