ಅ.22ರಂದು ಬೆಂಗಳೂರು ವಿವಿಯ ಪಿಎಚ್.ಡಿ ದಾಖಲಾತಿ ಕೌನ್ಸೆಲಿಂಗ್

Update: 2020-10-20 11:10 GMT

ಬೆಂಗಳೂರು, ಅ.20: ಬೆಂಗಳೂರು ವಿಶ್ವವಿದ್ಯಾಲಯದ ಪಿಹೆಚ್.ಡಿ ದಾಖಲಾತಿ ಕೌನ್ಸೆಲಿಂಗ್ ಪ್ರಕ್ರಿಯೆ ಅ. 22ರಂದು ನಡೆಯಲಿದೆ ಎಂದು ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ್ ಕೆ.ಆರ್. ತಿಳಿಸಿದ್ದಾರೆ.

ಪಿಎಚ್.ಡಿ ದಾಖಲಾತಿಗಾಗಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಅ.22ರಂದು ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ವರದಿ ಮಾಡಿಕೊಳ್ಳಬೇಕು. ಕೌನ್ಸೆಲಿಂಗ್ ಪ್ರಕ್ರಿಯೆ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಕೌನ್ಸೆಲಿಂಗ್‍ಗೆ ಹಾಜರಾಗಬೇಕು ಎಂದು ತಿಳಿಸಿದರು.

ಇಂಜಿನಿಯರಿಂಗ್ ವಿಭಾಗಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯುನಿವರ್ಸಿಟಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ಕೆಆರ್ ಸರ್ಕಲ್ ಬಳಿ ಬೆಳಗ್ಗೆ 8 ಗಂಟೆಗೆ ವರದಿ ಮಾಡಿಕೊಳ್ಳಬೇಕು. ಕಲಾ ವಿಜ್ಞಾನ, ವಾಣಿಜ್ಯ ಮತ್ತು ಶಿಕ್ಷಣ ನಿಕಾಯದ ವಿಭಾಗಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಜ್ಞಾನಭಾರತಿ ಆವರಣದಲ್ಲಿರುವ ಸ್ನಾತಕೋತ್ತರ ವಿಭಾಗದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.

ಪಿಹೆಚ್.ಡಿ ಜೇಷ್ಠತಾ ಪಟ್ಟಿ ಹಾಗೂ ಮತ್ತಿತರ ವಿವರಗಳು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಸೈಟ್ phd.Bangaloreuniversity.ac.in  ಅಥವಾ buphd.inhawk.com ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಇನ್ನು ಕೊರೋನ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು ಸೇರಿದಂತೆ ಸುರಕ್ಷಿತ ಅಂತರ ಕಾಯ್ದುಕೊಂಡು ಕೌನ್ಸೆಲಿಂಗ್‍ನಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News