24ಕ್ಕೆ ಕೊಲ್ಲೂರು ದೇವಸ್ಥಾನದಲ್ಲಿ ಸಂಜೆ ದರ್ಶನಕ್ಕೆ ನಿರ್ಬಂಧ

Update: 2020-10-20 13:28 GMT

ಉಡುಪಿ, ಅ.20: ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ.25ರವರೆಗೆ ನವರಾತ್ರಿ ಉತ್ಸವ ಜರಗಲಿದ್ದು, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರಕಾರದ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಅನುಷ್ಟಾನಗೊಳಿಸುವ ಸಲುವಾಗಿ ಅ.24ರ ಮಹಾನವಮಿ ದಿನದಂದು ನಡೆಯಲಿರುವ ರಥೋತ್ಸವದ ಸಲುವಾಗಿ ಸಂಜೆ 5:00 ಗಂಟೆಯಿಂದ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಭಂಧಿಸಲಾಗಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ನಡೆಯುವ ರಥೋತ್ಸವವನ್ನು ದೇವಸ್ಥಾನದ ಆವರಣದ ಒಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ನಡೆಸಲು ನಿರ್ಧರಿಸಿದ್ದು, ಆದ್ದರಿಂದ ಸಂಜೆ 5:00ರಿಂದ ಸಾರ್ವಜನಿಕರಿಗೆ, ಭಕ್ತರಿಗೆ ದೇವರ ದರ್ಶನವನ್ನು ನಿರ್ಬಂಧಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News