ಉಡುಪಿ: ಮಂಗಳವಾರ 136 ಮಂದಿಗೆ ಕೊರೋನ ಪಾಸಿಟಿವ್; 219 ಮಂದಿ ಗುಣಮುಖ

Update: 2020-10-20 13:57 GMT

ಉಡುಪಿ, ಅ.20: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 136 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ ಒಬ್ಬರು ಕೊರೋನ ಸೋಂಕಿನೊಂದಿಗೆ ಮೃತಪಟ್ಟರೆ, 219 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 136 ಮಂದಿಯಲ್ಲಿ ಮಕ್ಕಳು ಸೇರಿದಂತೆ 78 ಮಂದಿ ಪುರುಷರು ಹಾಗೂ 58 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 53 ಪುರುಷರು ಹಾಗೂ 36 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 66, ಕುಂದಾಪುರ ತಾಲೂಕಿನ 54 ಹಾಗೂ ಕಾರ್ಕಳ ತಾಲೂಕಿನ 16 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 136 ಮಂದಿಯಲ್ಲಿ 23 ಮಂದಿಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ 113 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

219 ಮಂದಿ ಗುಣಮುಖ: ಮಂಗಳವಾರ ಒಟ್ಟು 219 ಮಂದಿ ಸೋಂಕಿ ನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 19,114 ಆಗಿದೆ. ಜಿಲ್ಲೆಯಲ್ಲಿ ಸದ್ಯ 1742 ಸಕ್ರೀಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದವರು ವಿವರಿಸಿದರು.

1789 ನೆಗೆಟಿವ್: ಜಿಲ್ಲೆಯಲ್ಲಿ ಇಂದು ಒಟ್ಟು 1887 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1789 ಮಂದಿ ನೆಗೆಟಿವ್ ಬಂದಿದ್ದು, 98 (ಐಸಿಎಂಆರ್ ವರದಿ)ಮಂದಿ ಮಾತ್ರ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 20,994 ಆಗಿದೆ.
ಜಿಲ್ಲೆಯಲ್ಲಿ ಇಂದು ಒಟ್ಟು 1887 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1789 ಮಂದಿ ನೆಗೆಟಿವ್ ಬಂದಿದ್ದು, 98 (ಐಸಿಎಂಆರ್ ವರದಿ)ಮಂದಿ ಮಾತ್ರ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 20,994 ಆಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,60,438 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,39,444 ಮಂದಿ ನೆಗೆಟಿವ್ ಹಾಗೂ 20,994 ಮಂದಿ ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 19,114 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 176 ಮಂದಿ ಮೃತಪಟ್ಟಿದ್ದಾರೆ.

ವೃದ್ಧ ಸಾವು: ಮಂಗಳವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ 65 ವರ್ಷ ಪ್ರಾಯದ ಹಿರಿಯ ನಾಗರಿಕರು ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆ ಇದ್ದ ಇವರು ಉಸಿರಾಟ ತೊಂದರೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್‌ಗೆ ಪಾಸಿಟಿವ್ ಬಂದಿತ್ತು. ಚಿಕಿತ್ಸೆಯ ಹೊರತಾಗಿಯೂ ಅವರು ಸೋಂಕಿನಿಂದ ಚೇತರಿಸಿಕೊಳ್ಳಲ್ಲಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News