ಮನಪಾ: ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Update: 2020-10-20 14:43 GMT

ಮಂಗಳೂರು, ಅ.20: ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶದಲ್ಲಿನ ವಿವಿಧ ಕಲ್ಯಾಣ ಕಾರ್ಯಕ್ರಮದಡಿ 2020-21ನೇ ಸಾಲಿನಲ್ಲಿ ವ್ಯಕ್ತಿ ಸಂಬಂಧಿಸಿದ ಕಾರ್ಯಕ್ರಮಗಳ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೇ.24.10 ನಿಧಿಯ ಎಸ್ಸಿ-ಎಸ್ಟಿ ಕಲ್ಯಾಣ ಕಾರ್ಯಕ್ರಮ: ಪಕ್ಕಾ ಮನೆ ನಿರ್ಮಾಣ ಸಹಾಯಧನ, ಮನೆ ದುರಸ್ತಿಗೆ ಸಹಾಯಧನ, ಶಸ್ತ್ರ ಚಿಕಿತ್ಸೆ/ ವೈದ್ಯಕೀಯ ವೆಚ್ಚಕ್ಕೆ ಸಹಾಯಧನ

ಶೇ.7.25 ಬಡಜನರ ಕಲ್ಯಾಣ ಕಾರ್ಯಕ್ರಮ: ಶೌಚಾಲಯ ನಿರ್ಮಾಣಕ್ಕೆ ಸಹಾಯಧನ, ನಳ್ಳಿ ನೀರಿನ ಸಂಪರ್ಕಕ್ಕೆ ಸಹಾಯಧನ, ಅಡುಗೆ ಅನಿಲ ಸಂಪರ್ಕಕ್ಕೆ ಸಹಾಯಧನ, ಶಸ್ತ್ರ ಚಿಕಿತ್ಸೆಗೆ ಸಹಾಯಧನ.

ಶೇ.5 ವಿಕಲಚೇತನ ಕಲ್ಯಾಣ ಕಾರ್ಯಕ್ರಮ: ಸಣ್ಣ ಉದ್ದಿಮೆಗೆ ಸಹಾಯಧನ, ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ದುರಸ್ತಿಗೆ ಧನಸಹಾಯ, ಅಶಕ್ತರ ದ್ವಿಚಕ್ರ ವಾಹನ, ವೀಲ್‌ಚೇರ್, ಕೃತಕ ಕಾಲು, ಶ್ರವಣ ಸಾಧನ, ಮತ್ತು ವೈದ್ಯಕೀಯ ವೆಚ್ಚ, ಶಸ್ತ್ರಚಿಕಿತ್ಸೆಗೆ ಧನಸಹಾಯ, ಪೋಷಣಾ ಭತ್ಯೆ ಸೌಲಭ್ಯಗಳನ್ನು ಅರ್ಹರು ಪಡೆದುಕೊಳ್ಳಬಹುದು. ಅಜಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶವನ್ನು ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತರು(ಆಡಳಿತ) ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News