ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರವೇಶಾತಿ ಪ್ರಾರಂಭ

Update: 2020-10-20 17:15 GMT

ಬೆಂಗಳೂರು, ಅ.20: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 2020-21ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದೆ.

ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‍ಗಳಾದ ಬಿಎ, ಬಿಕಾಂ, ಎಂಎ, ಎಂಸಿಜೆ, ಎಂಕಾಂ, ಬಿಎಲ್‍ಐಎಸ್ಸಿ ಸೇರಿದಂತೆ ಇತರೆ ಕೋರ್ಸ್‍ಗಳಿಗೆ ಪ್ರವೇಶಾತಿ ಆರಂಭವಾಗಿದೆ.

ಕೋವಿಡ್ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳ ಮನವಿ ಮೇರೆಗೆ ಅಕ್ಟೋಬರ್ 29ರ ಅಂತಿಮ ದಿನದವರೆಗೆ ದಂಡ ಶುಲ್ಕವಿಲ್ಲದೇ ಪ್ರವೇಶಾತಿಯನ್ನು ಮಾಡಬಹುದಾಗಿದೆ. ವಿದ್ಯಾರ್ಥಿಗಳು ಮುಕ್ತ ವಿವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ KSOU admission portal ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಡೌನ್‍ಲೋಡ್ ಮಾಡಿಕೊಂಡು ಪ್ರಾದೇಶಿಕ ಕೇಂದ್ರಗಳಲ್ಲಿ ಸಲ್ಲಿಸಿ ಪ್ರವೇಶ ಪಡೆಯಬಹುದು.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.25 ರಷ್ಟು ವಿನಾಯಿತಿ ನೀಡಲಾಗಿದೆ. ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶ ಶುಲ್ಕದಲ್ಲಿ ವಿನಾಯಿತಿ ಪಡೆಯಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಸರಕಾರಿ ರಜೆ ದಿನಗಳಂದು ಮತ್ತು ರವಿವಾರದಂದು ಸಹ ಕಚೇರಿ ತೆರೆದಿರಲಿದ್ದು, ಪ್ರವೇಶಾತಿ ಮಾಡಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News