ಯಡಿಯೂರಪ್ಪ ಪ್ರಶ್ನಾತೀತ ನಾಯಕ, ಅವರ ನೇತೃತ್ವದಲ್ಲೇ ಚುನಾವಣೆ: ಗೃಹ ಸಚಿವ ಬೊಮ್ಮಾಯಿ

Update: 2020-10-21 04:40 GMT

ಬೆಂಗಳೂರು, ಅ.21: ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರಾಗಿದ್ದು, ಮುಂದಿನ ಚುನಾವಣೆಯನ್ನು ಕೂಡಾ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರಾಗಿದ್ದು, ಅವರ ನಾಯಕತ್ವದಲ್ಲಿ 2018 ರ ಚುನಾವಣೆಯನ್ನು ಎದುರಿಸಿ ಅವರ ನಾಯಕತ್ವದಲ್ಲೇ ಸರಕಾರವನ್ನು ಸಹ ರಚಿಸಲಾಗಿದೆ. ಅವರು ಸರಕಾರದ ಉಳಿದ ಅವಧಿಯನ್ನು ಪೂರ್ಣಗೊಳಿಸಿ ಮುಂದಿನ ಚುನಾವಣೆಯನ್ನು ಕೂಡಾ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವದು ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಕೆಲವರು ನೀಡುತ್ತಿರುವ ಇದರ ವ್ಯತಿರಿಕ್ತ ಹೇಳಿಕೆಗಳಿಗೆ ಯಾವುದೇ ಅರ್ಥ ಇರುವುದಿಲ್ಲ' ಎಂದು ಶಾಸಕ ಯತ್ನಾಳ ಹೇಳಿಕಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಇದಕ್ಕೆ ಕಮೆಂಟ್ ಮಾಡಿರುವ ಶಾಸಕ ಯತ್ನಾಳ್ ''ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಹೊರತು ಸಚಿವನಾಗುವದಕ್ಕೆ ಯಾರದೋ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ ಅದು ನನ್ನ ಜಾಯಮಾನ ಅಲ್ಲ'' ಎಂದು ಪ್ರತಿಕ್ರಿಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News