ನ.5ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಚಿವ ಸುರೇಶ್‍ಕುಮಾರ್

Update: 2020-10-21 15:42 GMT

ಬೆಂಗಳೂರು, ಅ.21: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನ.5ರಿಂದ ಪ್ರಾರಂಭವಾಗಲಿದ್ದು, ನಾಳೆ(ಅ.22) ವರ್ಗಾವಣೆ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಈ ಸಲ ಮೊದಲ ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News