ದ.ಕ. ಜಿಲ್ಲೆ : ಕೋವಿಡ್‌ಗೆ ಒಂಬತ್ತು ಬಲಿ; 215 ಮಂದಿಗೆ ಕೊರೋನ ಸೋಂಕು

Update: 2020-10-21 15:47 GMT

ಮಂಗಳೂರು, ಅ. 21: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ಮತ್ತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ 215 ಮಂದಿಗೆ ಸೋಂಕು ತಗುಲಿದ್ದು, 302 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 650ಕ್ಕೆ ಏರಿದೆ. ಜಿಲ್ಲೆಯಲ್ಲಿನ ಒಟ್ಟು 28,782 ಸೋಂಕಿತರ ಪೈಕಿ 25,287 ಮಂದಿ ಕೊರೋನ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 2,845 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

8,841 ಕೇಸು: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯ 8,841 ಕೇಸುಗಳು ಪತ್ತೆಯಾಗಿವೆ. ಇವರಿಂದ 10,14,830 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News