ರಾಜ್ಯದಲ್ಲಿ ಹೊಸದಾಗಿ 5,872 ಕೊರೋನ ಪ್ರಕರಣ ದೃಢ, 88 ಮಂದಿ ಮೃತ್ಯು

Update: 2020-10-21 15:50 GMT

ಬೆಂಗಳೂರು, ಅ.21: ರಾಜ್ಯದಲ್ಲಿ ಬುಧವಾರ 5,872 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 88 ಜನರು ಸೋಂಕಿಗೆ ಬಲಿಯಾಗಿದ್ದು, 9,289 ಜನರು ಗುಣಮುಖರಾಗಿದ್ದಾರೆ. ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 7,82,773ಕ್ಕೆ ತಲುಪಿದ್ದು, 947 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 10,696ಕ್ಕೆ ತಲುಪಿದ್ದು, ಬುಧವಾರ ಅನ್ಯ ಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,00,440ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

88 ಸೋಂಕಿತರು ಬಲಿ: ಬಳ್ಳಾರಿ 2, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 53, ಚಿತ್ರದುರ್ಗ 1, ದಕ್ಷಿಣ ಕನ್ನಡ 9, ದಾವಣಗೆರೆ 1, ಧಾರವಾಡ 2, ಹಾಸನ 3, ಕಲಬುರಗಿ 3, ಕೊಪ್ಪಳ 1, ಮೈಸೂರು 3, ರಾಮನಗರ 1, ಶಿವಮೊಗ್ಗ 1, ತುಮಕೂರು 4, ವಿಜಯಪುರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 5,872 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 114, ಬಳ್ಳಾರಿ 145, ಬೆಳಗಾವಿ 65, ಬೆಂಗಳೂರು ಗ್ರಾಮಾಂತರ 366, ಬೆಂಗಳೂರು ನಗರ 2,717, ಬೀದರ್ 14, ಚಾಮರಾಜನಗರ 33, ಚಿಕ್ಕಬಳ್ಳಾಪುರ 116, ಚಿಕ್ಕಮಗಳೂರು 73, ಚಿತ್ರದುರ್ಗ 74, ದಕ್ಷಿಣ ಕನ್ನಡ 215, ದಾವಣಗೆರೆ 304, ಧಾರವಾಡ 134, ಗದಗ 40, ಹಾಸನ 140, ಹಾವೇರಿ 23, ಕಲಬುರಗಿ 83, ಕೊಡಗು 51, ಕೋಲಾರ 49, ಕೊಪ್ಪಳ 52, ಮಂಡ್ಯ 208, ಮೈಸೂರು 220, ರಾಯಚೂರು 33, ರಾಮನಗರ 23, ಶಿವಮೊಗ್ಗ 177, ತುಮಕೂರು 143, ಉಡುಪಿ 117, ಉತ್ತರ ಕನ್ನಡ 74, ವಿಜಯಪುರ 38, ಯಾದಗಿರಿ ಜಿಲ್ಲೆಯಲ್ಲಿ 31 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 2,717 ಕೊರೋನ ಪ್ರಕರಣ ದೃಢ

ಬೆಂಗಳೂರು ನಗರದಲ್ಲಿ ಬುಧವಾರದಂದು 2,717 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 3,844 ಸೋಂಕಿತರು ಬಿಡುಗಡೆಯಾಗಿದ್ದು, 53ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 3,15,559 ಕೊರೋನ ಸೋಂಕಿತರು ದೃಢಪಟ್ಟಿದ್ದು, 3,631 ಜನರು ಸೋಂಕಿಗೆ ಬಲಿಯಾಗಿದ್ದಾರೆ. 2,48,584 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 63,343 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 18 ಕಂಟೈನ್ಮೆಂಟ್ ಜೋನ್‍ಗಳಿವೆ. ನಗರದ 9,39,229 ಜನರನ್ನು ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತರನ್ನು 11,00,888 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 25,09,250 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.12.47ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿ ರುವ ಪ್ರಮಾಣ ಶೇ.1.14ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.78.23ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News