ಪಚ್ಚನಾಡಿ ಭೂಕುಸಿತ: 14 ಕೋಟಿ ರೂ. ಅನುದಾನ ಬಿಡುಗಡೆ

Update: 2020-10-21 16:53 GMT

ಮಂಗಳೂರು, ಅ.21: ಪಚ್ಚನಾಡಿ ಹಾಗೂ ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಸಂಭವಿಸಿದ್ದ ಭೂ ಕುಸಿತಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಬುಧವಾರ 14 ಕೋಟಿ. ರೂ. ಅನುದಾನ ಬಿಡುಗಡೆಗೊಳಿಸಿದೆ.

ಭೂ ಕುಸಿತ ಉಂಟಾಗಿರುವ ಪಚ್ಚನಾಡಿ, ಕುಡುಪು ಪ್ರದೇಶಗಳಿಗೆ ರಾಜ್ಯ ಸರಕಾರದ ನಗರಾಭಿವೃದ್ಧಿ ಇಲಾಖೆಯಿಂದ ಮಂಗಳೂರು ಮಹಾ ನಗರ ಪಾಲಿಕೆಗೆ ಬಿಡುಗಡೆಗೊಳಿಸಲಾಗಿದೆ. ಈ ಹಿಂದೆ ಪಚ್ಚನಾಡಿ, ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಉಂಟಾದ ಭೂ ಕುಸಿತದಿಂದ ಹಾನಿಗೊಳಗಾಗಿರುವ ಸಂತ್ರಸ್ತರಿಗೆ ಅಂದಾಜು 20 ಕೋಟಿ ರೂ. ಪರಿಹಾರ ಪಾವತಿಸುವಂತೆ ಸರಕಾರಕ್ಕೆ ವಿಶೇಷ ಮನವಿಯನ್ನು ಸಂಸದರು ಹಾಗೂ ಶಾಸಕರು ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಿಂದ 14 ಕೋಟಿ ರೂ. ಬಿಡುಗಡೆಗೊಳಿಸಿದೆ. ಈ ಹಿಂದೆಯೇ ರಾಜ್ಯ ಸರಕಾರವು ಎಂಟು ಕೋಟಿ ಅನುದಾನ ಬಿಡುಗಡೆಗೊಳಿಸಿತ್ತು ಎಂದು ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News