​ಪಣಂಬೂರು ಕಡಲತೀರ ನಿರ್ವಹಣಾ ಸಮಿತಿ ರಚನೆ

Update: 2020-10-21 17:17 GMT

ಮಂಗಳೂರು, ಅ.21: ಪಣಂಬೂರು ಕಡಲತೀರಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು, ತೀರದಲ್ಲಿ ಜೀವಹಾನಿಯಾಗದಂತೆ ತಡೆಗಟ್ಟಲು ಪಣಂಬೂರು ಕಡಲತೀರ ನಿರ್ವಹಣೆಯ ಕಾರ್ಯನಿರ್ವಾಹಕ ಸಮಿತಿ (ಪಿಬಿಎಂಇಸಿ) ರಚಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಬುಧವಾರ ಆದೇಶ ಹೊರಡಿಸಿದ್ದಾರೆ.

ಅಧಿಕಾರಿಗಳು ಮತ್ತು ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಈ ಸಮಿತಿಯು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದೆ.

ಸಮಿತಿಗೆ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತರು ಅಧ್ಯಕ್ಷರಾಗಿರುತ್ತಾರೆ. ಪರಿಸರ-ಅರಣ್ಯ, ಪೊಲೀಸ್, ಕರಾವಳಿ ಕಾವಲು ಪಡೆ, ತಹಶೀಲ್ದಾರ್, ಎನ್‌ಎಂಪಿಟಿ ಸಂರಕ್ಷಣಾಧಿಕಾರಿ, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ, ಮಾಲಿನ್ಯ ನಿಯಂತ್ರಣಾಧಿಕಾರಿ, ಮನಪಾ ಪರಿಸರ ಅಭಿಯಂತರ, ಸ್ಥಳೀಯ ಕಾರ್ಪೊರೇಟರ್ ಸಮಿತಿಯ ಸದಸ್ಯರಾಗಿರುತ್ತಾರೆ. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಡಾ.ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News