ಮಹಾರಾಷ್ಟ್ರದಲ್ಲಿ ಸಿಬಿಐ ತನಿಖೆಯ ಅನುಮತಿ ಹಿಂತೆಗೆದುಕೊಂಡ ಉದ್ಧವ್ ಠಾಕ್ರೆ
Update: 2020-10-21 23:28 IST
ಮುಂಬೈ: ರಾಜ್ಯದಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ 'ಸಾಮಾನ್ಯ ಒಪ್ಪಿಗೆ'ಯನ್ನು ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರಕಾರ ಬುಧವಾರ ಹಿಂತೆಗೆದುಕೊಂಡಿದೆ.
ಯಾವುದೇ ಪ್ರಕರಣಗಳ ತನಿಖೆಯನ್ನು ಆರಂಭಿಸಲು ಇನ್ನು ಮುಂದೆ ಸಿಬಿಐಗೆ ರಾಜ್ಯ ಸರಕಾರದ ಅನುಮತಿಯ ಅಗತ್ಯವಿದೆ.
ಠಾಕ್ರೆ ಸರಕಾರ ಸಿಬಿಐಗೆ ತನಿಖೆ ನೆಡೆಸುವ ಒಪ್ಪಿಗೆಯನ್ನು ಹಿಂದೆ ತೆಗೆದುಕೊಳ್ಳುವುದಕ್ಕಿಂ ತ ಮುನ್ನ ಇತರ ಮೂರು ರಾಜ್ಯಗಳಾದ ರಾಜಸ್ಥಾನ, ಛತ್ತೀಸ್ ಗಢ ಹಾಗೂ ಪಶ್ಚಿಮಬಂಗಾಳ ತಮ್ಮ ರಾಜ್ಯಗಳಲ್ಲಿ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಒಪ್ಪಿಗೆಯನ್ನು ಹಿಂತೆಗೆದುಕೊಂಡಿವೆ.
ಈ ನಡೆಯು ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಸಿಬಿಐ ತನಿಖೆಯ ಮೇಲೆ ಯಾವುದೇ ಪರಿಣಾಮ ಉಂಟಾಗದು. ಏಕೆಂದರೆ ಈ ತನಿಖೆಯನ್ನು ಸುಪ್ರೀಂಕೋರ್ಟ್ ಆದೇಶಿಸಿದೆ. ಅಲ್ಲದೆ ಇದಕ್ಕೆ ಒಪ್ಪಿಗೆ ರಾಜ್ಯ ಸರಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.