ನಟಿ ಸಂಜನಾ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

Update: 2020-10-22 11:47 GMT

ಬೆಂಗಳೂರು, ಅ.22: ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜನಾ ಗಲ್ರಾನಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅ.24ಕ್ಕೆ ಮುಂದೂಡಿಕೆ ಮಾಡಿದೆ.

ಜಾಮೀನು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಹಷ್ಮತ್ ಪಾಷಾ ಅವರು, ಪೊಲೀಸರು ಸಂಜನಾ ಅವರ ಬಳಿ ಯಾವುದೇ ಡ್ರಗ್ಸ್ ಅನ್ನು ವಶಕ್ಕೆ ಪಡೆದಿಲ್ಲ. ಇಂಥದ್ದೇ ಪ್ರಕರಣದಲ್ಲಿ ಮುಂಬೈ ಹೈಕೋರ್ಟ್ ನಟಿ ರಿಯಾ ಅವರಿಗೆ ಜಾಮೀನು ಮಂಜೂರು ಮಾಡಿದೆ ಎಂದು ಪೀಠಕ್ಕೆ ತಿಳಿಸಿದರು.

ನಟಿ ಸಂಜನಾ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ. ಈಕೆ ವಿರುದ್ಧ ಡ್ರಗ್ಸ್ ಕುರಿತಂತೆ ಈ ಹಿಂದೆ ಯಾವುದೇ ದೂರು ದಾಖಲಾಗಿಲ್ಲ. ಹೀಗಾಗಿ, ಜಾಮೀನು ಮಂಜೂರು ಮಾಡುವಂತೆ ಪೀಠಕ್ಕೆ ಮನವಿ ಮಾಡಿಕೊಂಡರು. 

ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News