ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಮೋದಿಗೆ ಕೊರೋನ,ಆಸ್ಪತ್ರೆಗೆ ದಾಖಲು

Update: 2020-10-22 12:12 GMT

ಹೊಸದಿಲ್ಲಿ: ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಅವರು ತನಗೆ ಕೊರೋನ ವೈರಸ್ ಸೋಂಕು ತಗಲಿರುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದು, ಪಾಟ್ನಾದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಹಾರದಲ್ಲಿ ಮೂರು ಹಂತದ ವಿಧಾನಸಭೆ ಚುನಾವಣೆ ಆರಂಭವಾಗಲು ಇನ್ನು ಕೆಲವೇ ದಿನಗಳು ಇರುವಾಗ ಸುಶೀಲ್ ಮೋದಿಗೆ ಕೊರೋನ ಸೋಂಕು ಕಾಣಿಸಿಕೊಂಡಿದೆ. ಬಿಹಾರ ಚುನಾವಣೆಯು ಅಕ್ಟೋಬರ್ 28ರಂದು ಆರಂಭವಾಗಲಿದ್ದು, ನವೆಂಬರ್ 10 ರಂದು ಫಲಿತಾಂಶ ಬರಲಿದೆ.

68ರ ವಯಸ್ಸಿನ ಮೋದಿ ರವಿವಾರದಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಬಕ್ಸರ್ ಹಾಗೂ ಭೋಜ್ಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ತನಕ ಈ ಇಬ್ಬರು ನಾಲ್ಕು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಮೋದಿ ಸೋಮವಾರ ಕೊನೆಯ ಬಾರಿ ಪ್ರಚಾರದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News