ಉಡುಪಿ : ಹೊಸದಾಗಿ 141 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

Update: 2020-10-22 14:02 GMT

ಉಡುಪಿ, ಅ. 22: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 141 ಮಂದಿಯಲ್ಲಿ ಕೋವಿಡ್-19 ಸೋಂಕು ಪರೀಕ್ಷೆಯಿಂದ ದೃಢಪಟ್ಟಿದೆ. ದಿನದಲ್ಲಿ ಉಡುಪಿಯ 50 ವರ್ಷ ಪ್ರಾಯದ ಪುರುಷರೊಬ್ಬರು ಮೃತಪಟ್ಟರೆ, 267 ಮಂದಿ ಚಿಕಿತ್ಸೆ ಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 141 ಮಂದಿಯಲ್ಲಿ ಮಕ್ಕಳು ಸೇರಿದಂತೆ 79 ಮಂದಿ ಪುರುಷರು ಹಾಗೂ 62 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 58 ಪುರುಷರು ಹಾಗೂ 52 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 64, ಕುಂದಾಪುರ ತಾಲೂಕಿನ 45 ಹಾಗೂ ಕಾರ್ಕಳ ತಾಲೂಕಿನ 31 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಅಲ್ಲದೇ ಹೊರಜಿಲ್ಲೆಯಿಂದ ಬಂದ ಒಬ್ಬರೂ ಚಿಕಿತ್ಸೆ ವೇಳೆ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ. ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 141 ಮಂದಿಯಲ್ಲಿ 15 ಮಂದಿಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ 126 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

267 ಮಂದಿ ಗುಣಮುಖ: ಗುರುವಾರ ಒಟ್ಟು 267 ಮಂದಿ ಸೋಂಕಿ ನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 19,572 ಆಗಿದೆ. ಜಿಲ್ಲೆಯಲ್ಲಿ ಸದ್ಯ 1541 ಸಕ್ರಿಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.

1480 ನೆಗೆಟಿವ್:  ಜಿಲ್ಲೆಯಲ್ಲಿ ಇಂದು ಒಟ್ಟು 1624 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1480 ಮಂದಿ ನೆಗೆಟಿವ್ ಬಂದಿದ್ದು, 144 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,292 ಆಗಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,64,167 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,42,875 ಮಂದಿ ನೆಗೆಟಿವ್ ಹಾಗೂ 21,292 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 19,572 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 177 ಮಂದಿ ಮೃತಪಟ್ಟಿದ್ದಾರೆ.

ಒಬ್ಬರು ಮೃತ್ಯು: ಗುರುವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಉಡುಪಿ ತಾಲೂಕಿನ 50 ವರ್ಷ ಪ್ರಾಯದ ಪುರುಷರು ಮೃತಪಟ್ಟಿದ್ದಾರೆ. ಕಿಡ್ನಿ, ಹೃದಯ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳಿಂದ ನರಳುತಿದ್ದ ಇವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿದಾಗ ಕೋವಿಡ್‌ಗೆ ಪಾಸಿಟಿವ್ ಬಂದಿದ್ದರು. ಇದೀಗ ಚಿಕಿತ್ಸೆ ಫಲಕಾರಿ ಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News