'ಕಾಡು ಮನುಷ್ಯ' ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ನಳಿನ್ ಕುಮಾರ್ ಪ್ರತಿಕ್ರಿಯೆ

Update: 2020-10-22 14:18 GMT

ಬೆಂಗಳೂರು, ಅ.22: ಸಿದ್ದರಾಮಯ್ಯನವರೇ, ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ. ಇದು ನಿಜವೇ ಆಗಿದ್ದಲ್ಲಿ ಪೊಲೀಸರಿಗೆ ದೂರು ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ. ಇದು ನಿಜವೇ ಆಗಿದ್ದಲ್ಲಿ ಪೊಲೀಸರಿಗೆ ದೂರು ಕೊಡಿ. ಯಾಕೆಂದರೆ ಇದು ನಿಮ್ಮಂಥ ನಾಯಕರಿಗೆ ಶೋಭಿಸುವ ಭಾಷೆಯಂತೂ ಅಲ್ಲ. ನಿಮ್ಮ ಖಾತೆ ಹ್ಯಾಕ್ ಆಗದೆ ಇದ್ದಲ್ಲಿ ನಿಮ್ಮ ಅಸಹನೆ ಮತ್ತು ಅದನ್ನು ವ್ಯಕ್ತಪಡಿಸಿದ ರೀತಿಯ ಬಗ್ಗೆ ನನಗೆ ಸಹಾನುಭೂತಿಯಿದೆ ಎಂದು ಅವರು ತಿಳಿಸಿದ್ದಾರೆ.

''ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು'' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News