ತೃತೀಯ ಲಿಂಗಿಗಳ ಹಕ್ಕು ರಕ್ಷಣೆ ವಿರುದ್ಧವಾದ ಕಾಯ್ದೆ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-10-22 14:25 GMT

ಬೆಂಗಳೂರು, ಅ.22: ಕೇಂದ್ರ ಸರಕಾರ ಜಾರಿಗೆ ತಂದಿರುವ ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣಾ ಕಾಯ್ದೆ 2019ರಲ್ಲಿ ಸಂವಿಧಾನದ ವಿರುದ್ಧವಾಗಿರುವ ಸೆಕ್ಷನ್ 4, 5, 6 ಮತ್ತು 7ನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 

ಈ ಕುರಿತು ಒಂದೆಡೆ, ವಿಮೋಚನಾ ಮತ್ತು ಇತರ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಯಾವ ಲಿಂಗ ಎಂಬುದನ್ನು ವ್ಯಕ್ತಿಯೊಬ್ಬ ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ಇರಬೇಕು ಎಂದು ಕೋರ್ಟ್ ಹೇಳಿದೆ. ಆದರೆ, ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣಾ ಕಾಯ್ದೆಯ ಸೆಕ್ಷನ್‍ಗಳು ಲಿಂಗದ ಬಗ್ಗೆ ಘೋಷಿಸಿಕೊಳ್ಳಲು ಅವಕಾಶವಿಲ್ಲ. ಜಿಲ್ಲಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕೆಂದು ತಿಳಿಸಿದೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News