ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Update: 2020-10-22 14:26 GMT

ರಾಮನಗರ, ಅ.22: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಇಲ್ಲವೇ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಂಡಿದೆ.

2020-21ನೇ ಸಾಲಿನಲ್ಲಿ ರಾಮನಗರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ 15,000 ರೂ.ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸೆಸೆಲ್ಸಿ ಅಂಕಪಟ್ಟಿ, ಪದವಿ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ/ ಸ್ನಾತಕೋತ್ತರ ಪದವಿ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಲಗತ್ತಿಸಿ ನ.5ರೊಳಗೆ ಕಚೇರಿಯ ಅವಧಿಯಲ್ಲಿ ಖುದ್ದಾಗಿ ಇಲ್ಲವೆ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ.101, ನೆಲ ಮಹಡಿ, ನೂತನ ಜಿಲ್ಲಾ ಸಂಕೀರ್ಣ, ಮಾರುತಿ ನಗರ, ರಾಮನಗರ. ಇಲ್ಲಿ ಕಚೇರಿ ಅವಧಿಯಲ್ಲಿ ಸಂಪರ್ಕಿಸುವಂತೆ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News