ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಅ.26ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಜೆಸಿಟಿಯು ಕರೆ

Update: 2020-10-22 16:52 GMT

ಬೆಂಗಳೂರು, ಅ.22: ಕೇಂದ್ರ ಸರಕಾರದ ರೈತ-ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಜೆಸಿಟಿಯು(ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ) ವತಿಯಿಂದ ಅ.26ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆ, ಕೋವಿಡ್ ಸಂಕಟದ ಮಧ್ಯದಲ್ಲಿ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಕೇಂದ್ರ ಸರಕಾರ ರೈತವಿರೋಧಿ ಸುಗ್ರೀವಾಜ್ಞೆಗಳನ್ನು ಹಾಗೂ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಈ ಕ್ರಮದ ವಿರುದ್ಧ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಮುಷ್ಕರಕ್ಕೆ ಕರೆ ನೀಡಿದೆ.

ಮುಷ್ಕರಕ್ಕೆ ಪೂರ್ವ ತಯಾರಿಯಾಗಿ ಅ.23ರಂದು ಬೆಳಗ್ಗೆ ಎಐಟಿಯುಸಿ ರಾಜ್ಯ ಕಚೇರಿಯ ಎಂ.ಸಿ.ನರಸಿಂಹನ್ ಸಭಾಂಗಣದಲ್ಲಿ ರಾಜ್ಯ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರು ಹಾಗೂ ವಿವಿಧ ಫೆಡರೇಷನ್‍ಗಳ ನಾಯಕರು ಮಾತನಾಡಲಿದ್ದಾರೆಂದು ಜೆಸಿಟಿಯು ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News