ಬೈಕ್ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Update: 2020-10-22 17:00 GMT

ಉಳ್ಳಾಲ : ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಘಟನೆಯಲ್ಲಿ ಬೈಕ್ ಹಿಂಬದಿ ಸವಾರ ಬಾಲಕ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸವಾರ ಮತ್ತು ಪಾದಚಾರಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಸಂಕೊಳಿಗೆ  ಬಳಿ ಗುರುವಾರ ಸಂಜೆ ಸಂಭವಿಸಿದೆ.

ಮಂಜೇಶ್ವರ ಹೊಸಂಗಡಿ ಅಂಗಡಿಪದವಿನ ಅನಂತ ಗ್ಯಾಸ್ ಏಜೆನ್ಸಿ ಮಾಲಕ ಗೋಪಾಲ-ಶೋಭಾ ದಂಪತಿ ಪುತ್ರ ಪಿಯುಸಿ ವಿದ್ಯಾರ್ಥಿ ಅಶ್ವಿತ್ (16) ಮೃತಪಟ್ಟಿದ್ದು,  ಇನ್ನೋರ್ವ ಪುತ್ರ ಬೈಕ್ ಸವಾರ ಅಶ್ವಿನ್ (21) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾದಚಾರಿ ಹೆಸರು ತಿಳಿದುಬಂದಿಲ್ಲ.  ಮಂಜೇಶ್ವರ ಕಡೆಯಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ  ರಾ.ಹೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬೈಕ್ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಅಪ್ಪಳಿಸಿದೆ.  ಘಟನಾ ಸ್ಥಳಕ್ಕೆ ನಾಗುರಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News