9 ಸಾವಿರ ಪೊಲೀಸರಿಗೆ ಕೊರೋನ ಸೋಂಕು, 85 ಮಂದಿ ಬಲಿ: ಪ್ರವೀಣ್ ಸೂದ್

Update: 2020-10-22 17:49 GMT

ಬೆಂಗಳೂರು, ಅ.22: ಪೊಲೀಸ್ ಇಲಾಖೆಯ 9 ಸಾವಿರ ಮಂದಿಗೆ ಕೊರೋನ ಸೋಂಕು ತಗುಲಿದ್ದು, ಈ ಪೈಕಿ 85 ಮಂದಿ ಬಲಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.

ಗುರುವಾರ ನಗರದ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ  ‘ಸ್ಮಾರಣಾಂಜಲಿ’ ಪೊಲೀಸ್ ಅಮರವೀರರ ಛಾಯಾಚಿತ್ರ ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಲ್ಲಿಯ ತನಕ 85 ಪೊಲೀಸರು ಕೋವಿಡ್‍ಗೆ ಬಲಿಯಾಗಿದ್ದಾರೆ. ಇತರೆ ಕಾರಣಗಳಿಂದ 185 ಪೊಲೀಸರು ಪ್ರಾಣತ್ಯಾಗ ಮಾಡಿದ್ದಾರೆ. ಆದರೆ, ಒಟ್ಟಾರೆ ಇಲ್ಲಿಯವರೆಗೆ 9 ಸಾವಿರ ಪೊಲೀಸರು ಕೋವಿಡ್ ಸೋಂಕಿಗೆ ತುತ್ತಾಗಿ ವಾಸಿಯಾಗಿದ್ದಾರೆ ಎಂದು ಅವರು ಹೇಳಿದರು.

ಕೋವಿಡ್-19 ಸಮಯದಲ್ಲಿ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ, ಪ್ರತಿ ಪೊಲೀಸರ ಕುಟುಂಬ ಒತ್ತಡ ಹಾಗೂ ಭಯದ ನಡುವೆ ಸಹ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಈ ಧೈರ್ಯಕ್ಕೆ ಅವರಿಗೆ ಧನ್ಯವಾದಗಳು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News