ನವರಾತ್ರಿ ಪೂಜೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Update: 2020-10-22 18:18 GMT

ಲಕ್ನೊ:ಉತ್ತರಪ್ರದೇಶದ ಮಹೊಬಾ ಜಿಲ್ಲೆಯ ಪಾನ್ವಾಡಿ ಪ್ರದೇಶದಲ್ಲಿ ನವರಾತ್ರಿ ಪೂಜೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ 19ರ ವಯಸ್ಸಿನ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಯುವತಿಯು ಬುಧವಾರ ರಾತ್ರಿ ನವರಾತ್ರಿ ಹಬ್ಬದಲ್ಲಿ ದುರ್ಗಾ ಪೂಜೆಯಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಮೂವರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾನ್ವಾಡಿ ಪ್ರದೇಶದಲ್ಲಿ ಅತ್ಯಾಚಾರ ಘಟನೆ ವರದಿಯಾಗಿದೆ. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮೂವರು ಆರೋಪಿಗಳನ್ನು ಘಟನೆ ನಡೆದ ದಿನವೇ ಬಂಧಿಸಿದ್ದಾರೆ. ಸಂತ್ರಸ್ತೆ ಯುವತಿಯನ್ನುವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ಹೇಳಿದ್ದಾರೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News