ಕರ್ನಾಟಕಕ್ಕೂ ಉಚಿತವಾಗಿ ಕೊರೋನ ಲಸಿಕೆ ಕೊಡಿಸುವ 'ಧಮ್' ಇದೆಯೇ ನಳಿನ್ ಕುಮಾರ್ ಅವರೇ?: ಸಿದ್ದರಾಮಯ್ಯ

Update: 2020-10-23 08:59 GMT

ಬೆಂಗಳೂರು, ಅ.23: ಬಿಹಾರದಲ್ಲಿ ಕೊರೋನ ಲಸಿಕೆಯನ್ನು ಉಚಿತವಾಗಿ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದ ರಾಜ್ಯಸಭಾ ಸದಸ್ಯೆಯಾಗಿರುವುದರಿಂದ ರಾಜ್ಯದಲ್ಲೂ ಜನರಿಗೆ ಕೊರೋನ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' ನಿಮಗೆ ಇದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕ ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಪ್ರಾಣ ರಕ್ಷಕ ಕೊರೋನ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಿರಾ ನಳಿನ್ ಕುಮಾರ್ ಕಟೀಲು ಅವರೇ?" ಎಂದು ಪ್ರಶ್ನಿಸಿದ್ದಾರೆ.

"ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೋನದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೋನ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' (ಇದು ನಿಮ್ಮದೇ ಭಾಷೆ) ನಿಮಗಿದೆಯೇ ನಳಿನ್ ಕುಮಾರ್ ಅವರೇ?" ಎಂದು ಸವಾಲೆಸೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News