ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಬಲಿ
Update: 2020-10-23 19:18 IST
ಮಧುರೈ: ಮಧುರೈನ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ನಡೆದ ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಸಾಯನಿಕಗಳು ಮಿಕ್ಸ್ ಆದ ಪರಿಣಾಮ ಬೆಂಕಿ ಹಿಡಿದು ಸರಣಿ ಸ್ಫೋಟಗಳಿಗೆ ಕಾರಣವಾಯಿತು ಎಂದು ಆರಂಭಿಕ ತನಿಖೆಯನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.
ಇತರ ಹಲವು ಕಾರ್ಮಿಕರು ಸುರಕ್ಷಿತವಾಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್,"ದೀಪಾವಳಿ ಹಬ್ಬದ ಮೊದಲು ಪಟಾಕಿ ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಸರಕಾರ ಖಚಿತಪಡಿಸಿಕೊಳ್ಳಬೇಕು'' ಎಂದು ಒತ್ತಾಯಿಸಿದರು.