ಉಡುಪಿ ಜಿಲ್ಲೆ : ಜು.15ರ ಬಳಿಕ ಕನಿಷ್ಠ ಕೊರೋನ ಪಾಸಿಟಿವ್ ದೃಢ

Update: 2020-10-23 14:27 GMT

ಉಡುಪಿ, ಅ.23: ಜಿಲ್ಲೆಯಲ್ಲಿ ಶುಕ್ರವಾರ ಕೇವಲ 50 ಮಂದಿಯಲ್ಲಿ ಹೊಸದಾಗಿ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಕಳೆದ ಜುಲೈ 15ರ ಬಳಿಕ ಕಂಡು ಬಂದ ಕನಿಷ್ಠ ಸಂಖ್ಯೆಯ ಪಾಸಿಟಿವ್ ಇದಾಗಿದೆ. ಅಂದು 53 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿತ್ತು.

ಜಿಲ್ಲೆಯಲ್ಲಿಂದು ಕನಿಷ್ಠ ಸಂಖ್ಯೆಯ ಪಾಸಿಟಿವ್‌ನೊಂದಿಗೆ ಉಡುಪಿಯ 50 ವರ್ಷ ಪ್ರಾಯದ ಪುರುಷರೊಬ್ಬರು ಮೃತಪಟ್ಟರೆ, 182 ಮಂದಿ ಚಿಕಿತ್ಸೆ ಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಜಿಲ್ಲೆಯಲ್ಲಿಂದು ಕನಿಷ್ಠ ಸಂಖ್ಯೆಯ ಪಾಸಿಟಿವ್‌ನೊಂದಿಗೆ ಉಡುಪಿಯ 50 ವರ್ಷ ಪ್ರಾಯದ ಪುರುಷರೊಬ್ಬರು ಮೃತಪಟ್ಟರೆ, 182 ಮಂದಿ ಚಿಕಿತ್ಸೆ ಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 50 ಮಂದಿಯಲ್ಲಿ ಮಕ್ಕಳು ಸೇರಿದಂತೆ 26 ಮಂದಿ ಪುರುಷರು ಹಾಗೂ 24 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 13 ಪುರುಷರು ಹಾಗೂ 17 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 23, ಕುಂದಾಪುರ ತಾಲೂಕಿನ 24 ಹಾಗೂ ಕಾರ್ಕಳ ತಾಲೂಕಿನ ಮೂವರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 50 ಮಂದಿಯಲ್ಲಿ ಐವರನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿದರೆ, ಉಳಿದ 45 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

182 ಮಂದಿ ಗುಣಮುಖ: ಶುಕ್ರವಾರ ಒಟ್ಟು 182 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 19,754 ಆಗಿದೆ. ಜಿಲ್ಲೆಯಲ್ಲಿ ಸದ್ಯ 1408 ಸಕ್ರೀಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.

1576 ನೆಗೆಟಿವ್: ಜಿಲ್ಲೆಯಲ್ಲಿ ಇಂದು ಒಟ್ಟು 1627 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1576 ಮಂದಿ ನೆಗೆಟಿವ್ ಬಂದಿದ್ದು, 51(ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,340 ಆಗಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,65,794 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,44,454 ಮಂದಿ ನೆಗೆಟಿವ್ ಹಾಗೂ 21,340 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 19,754 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದು, ಒಟ್ಟು 178 ಮಂದಿ ಮೃತಪಟ್ಟಿದ್ದಾರೆ.

ಒಬ್ಬರು ಮೃತ್ಯು: ಶುಕ್ರವಾರವೂ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಉಡುಪಿ ತಾಲೂಕಿನ 50 ವರ್ಷ ಪ್ರಾಯದ ಪುರುಷರು ಮೃತಪಟ್ಟಿದ್ದಾರೆ. ವಿವಿಧ ಸಮಸ್ಯೆಗಳ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿದ ಇವರು ಕೋವಿಡ್‌ಗೆ ಪಾಸಿಟಿವ್ ಬಂದಿದ್ದರು. ಇದರಿಂದ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News