ಮಂಗಳೂರು ಏರ್‌ಪೋರ್ಟ್‌ನಲ್ಲಿ 27 ಲಕ್ಷ ರೂ. ಮೌಲ್ಯದ ಚಿನ್ನ ವಶ
Update: 2020-10-23 20:48 IST
ಮಂಗಳೂರು, ಅ. 23: ಇಲ್ಲಿನ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 27,36,659 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಮುಹಮ್ಮದ್ ಅಶ್ರಫ್ ಬಂಧಿತ ಆರೋಪಿ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಪ್ರಯಾಣಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.
ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಚಿನ್ನವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.