ದ.ಕ. ಜಿಲ್ಲೆ : ಕೋವಿಡ್‌ಗೆ ನಾಲ್ವರು ಬಲಿ; 329 ಮಂದಿಗೆ ಕೊರೋನ ಸೋಂಕು

Update: 2020-10-23 15:22 GMT

ಮಂಗಳೂರು, ಅ.23: ದ.ಕ. ಜಿಲ್ಲೆಯಲ್ಲಿ ಕೊರೋನದಿಂದಾಗಿ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಈ ನಡುವೆ ಶುಕ್ರವಾರ 329 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 290 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಕೊರೋನದಿಂದಾಗಿ ಮೃತಪಟ್ಟವರ ಸಂಖ್ಯೆ 657ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ 29,265 ಸೋಂಕಿತರ ಪೈಕಿ 25,825 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2,783 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News