ಕ್ಷುಲ್ಲಕ ಕಾರಣಕ್ಕೆ ವೈದ್ಯನ ಮೇಲೆ ಹಲ್ಲೆ: ಆರೋಪ
Update: 2020-10-23 23:35 IST
ಬೆಂಗಳೂರು, ಅ.23: ಕ್ಷುಲ್ಲಕ ಕಾರಣಕ್ಕಾಗಿ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ನಗರದ ಕೊಡಿಗೇಹಳ್ಳಿ ಗಣೇಶ ದೇವಸ್ಥಾನ ವೃತ್ತದ ಬಳಿ ಕೊರೋನ ಸಂಬಂಧ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ವೆಂಕಟೇಶ್ ಎಂಬುವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದಾಗಿ ಹೇಳಲಾಗುತ್ತಿದೆ.
ಕೇಶವ್, ಜಯರಾಮ್ ಹಾಗೂ ನಾರಾಯಣ ಎಂಬುವರು ಮಾಸ್ಕ್ ಧರಿಸದೆ ಕೋವಿಡ್ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು. ಈ ಬಗ್ಗೆ ವೈದ್ಯ ವೆಂಕಟೇಶ್ ಪ್ರಶ್ನಿಸಿದಾಗ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ವೈದ್ಯ ವೆಂಕಟೇಶ್ ಒತ್ತಾಯಿಸಿದ್ದಾರೆ.