ಪಿಯು ವಿದ್ಯಾರ್ಥಿಗಳ ದಾಖಲಾತಿಗೆ ಅವಧಿ ವಿಸ್ತರಣೆ

Update: 2020-10-24 12:05 GMT

ಬೆಂಗಳೂರು, ಅ.24: ಪ್ರಥಮ ಪಿಯುಸಿ ದಾಖಲಾತಿಗೆ ಅಂತಿಮ ದಿನಾಂಕವನ್ನು ನ.27ರವರೆಗೆ ಹಾಗೂ ದ್ವಿತೀಯ ಪಿಯು ದಾಖಲಾತಿಗೆ ಕೊನೆಯ ದಿನಾಂಕವನ್ನು ನ.13ರವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. 

ಈ ಮೊದಲು ಪಿಯು ವಿದ್ಯಾರ್ಥಿಗಳ ದಾಖಲಾತಿಗೆ ಅ.29 ಕೊನೆಯ ದಿನಾಂಕವೆಂದು ಪ್ರಕಟಿಸಲಾಗಿತು. ಆದರೆ, ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರು, ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಹಾಗೂ ಪೂರಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News