ನಿಮ್ಮ ಮನೆ ಮಗಳು ನಾನು, ಸೇವೆಗೆ ಒಂದು ಅವಕಾಶ ಕೊಡಿ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮನವಿ

Update: 2020-10-24 12:49 GMT

ಬೆಂಗಳೂರು, ಅ. 24: `ನಾನು ನಿಮ್ಮ ಮನೆ ಮಗಳು. ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿ ಕೊಡಿ' ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ಇಂದಿಲ್ಲಿ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಶನಿವಾರ ಕ್ಷೇತ್ರದ ವಿವಿಧ ವಾರ್ಡ್‍ಗಳಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜತೆ ಪ್ರಚಾರ ನಡೆಸಿದ ಕುಸುಮಾ ಅವರು, `ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ. ನಿಮ್ಮ ಮಗಳಾಗಿ ನಾನು ಸದಾ ನಿಮ್ಮ ಕಷ್ಟ ಸುಖದಲ್ಲಿ ಭಾಗಿಯಾಗಿರುತ್ತೇನೆ. ನೀವು ಕೊಡುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ಕೆಲಸ ಮಾಡಿ ನಿಮ್ಮ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ನೀವು ಕೊಡುವ ಈ ಅವಕಾಶ ಪ್ರೋತ್ಸಾಹವನ್ನು ಹಣ ಅಥವಾ ಅಧಿಕಾರದ ಆಸೆಗೆ ನಾನು ಎಂದಿಗೂ ಮಾರಾಟ ಮಾಡಿಕೊಳ್ಳುವುದಿಲ್ಲ. ಈ ಕ್ಷೇತ್ರದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಮಹಿಳೆಯರಿಗೆ ರಕ್ಷಣೆ, ಯುವಕರಿಗೆ ಉದ್ಯೋಗ ಸೇರಿದಂತೆ ಸರಕಾರದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಬದ್ಧವಾಗಿದ್ದೇನೆ. ನವೆಂಬರ್ 3ರಂದು ನಡೆಯುವ ಉಪ ಚುನಾವಣೆಯಂದು ಕ್ರಮ ಸಂಖ್ಯೆ-1, ಹಸ್ತದ ಗುರುತಿಗೆ ನಿಮ್ಮ ಮತ ನೀಡಿ ಮನೆ ಮಗಳಿಗೆ ಆಶೀರ್ವಾದ ಮಾಡಿ ಎಂದು ಕುಸುಮಾ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News