ರಾಜ್ಯದಲ್ಲಿ ಇನ್ನೆರೆಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2020-10-24 14:14 GMT

ಬೆಂಗಳೂರು, ಅ.24: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಅ.25 ಮತ್ತು 26ರಂದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ ಆರ್ಭಟ ತಗ್ಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಅ.24ರಿಂದ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದ್ದು, ನ.27 ಮತ್ತು 28ರಂದು ಒಣಹವೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಬೆಳಗಾವಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಪ್ರದೇಶಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು ಯೆಲ್ಲೋಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News