ಗೃಹಿಣಿ ಅನುಮಾನಾಸ್ಪದ ಸಾವು

Update: 2020-10-24 15:48 GMT

ಬೆಂಗಳೂರು, ಅ.24: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೋಜಾ(24) ಎಂಬಾಕೆ ಮೃತ ಗೃಹಣಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತ ದೇಹ ಪತ್ತೆಯಾಗಿದೆ.

ಒಂದು ವರ್ಷದ ಹಿಂದೆ ವಿಕಾಸ್ ಎಂಬಾತನೊಂದಿಗೆ ರೋಜಾ ವಿವಾಹವಾಗಿದ್ದು, ಇಲ್ಲಿನ ಹೆಸರುಘಟ್ಟ ಮುಖ್ಯರಸ್ತೆಯ ಗೃಹಲಕ್ಷ್ಮೀ ಲೇಔಟ್‍ನಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ.

ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ರೋಜಾ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ಮೇಲೆ ಕಿರುಕುಳ ಆರೋಪ ಕೇಳಿಬಂದಿದೆ. ಈ ಬಗ್ಗೆ ಪೀಣ್ಯ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News