ಕೋವಿಡ್‍ಯೇತರ ಸಾವುಗಳ ಬಗ್ಗೆ ಲೆಕ್ಕಪರಿಶೋಧನೆಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಆಗ್ರಹ

Update: 2020-10-24 15:50 GMT

ವಿಜಯಪುರ, ಅ.24: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೋನ ನೆಪದಲ್ಲಿ ಇತರ ರೋಗಿಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಆದುದರಿಂದ, ರಾಜ್ಯ ಸರಕಾರವು ಕೋವಿಡ್‍ಯೇತರ ಆರೋಗ್ಯ ಸಮಸ್ಯೆಯಿಂದ ಸಂಭವಿಸಿರುವ ಸಾವುಗಳ ಬಗ್ಗೆಯೂ ಲೆಕ್ಕಪರಿಶೋಧನೆ ಮಾಡಬೇಕು ಎಂದು ಮಾಜಿ ಸಚಿವ ಶಿವಾನಂದ ಪಾಟೀಲ್ ಆಗ್ರಹಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ಲಾಕ್‍ಡೌನ್‍ಗಿಂತ ಮುಂಚೆ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸರಾಸರಿ ಪ್ರತಿದಿನ 1300-1500 ಜನ ಹೊರ ರೋಗಿಗಳ ವಿಭಾಗದಲ್ಲಿ ನೋಂದಣಿ ಮಾಡಿಸಿಕೊಳ್ಳುತ್ತಿದ್ದರು. ಆದರೆ, ಇತ್ತೀಚೆಗೆ 200 ಜನ ಕೂಡ ಜಿಲ್ಲಾಸ್ಪತ್ರೆಗಳಿಗೆ ಬರುತ್ತಿಲ್ಲ ಎಂಬ ಮಾಹಿತಿಯಿದೆ ಎಂದರು.

ಕೋವಿಡ್ ಸೋಂಕು ಅಲ್ಲದೆ, ಇತರ ಆರೋಗ್ಯ ಸಮಸ್ಯೆಗಳಿಂದಲೂ ಹಲವಾರು ಮಂದಿ ಈ ಲಾಕ್‍ಡೌನ್ ಅವಧಿಯಲ್ಲಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಕೋವಿಡ್ ನೆಪವನ್ನು ಮುಂದಿಟ್ಟುಕೊಂಡು ಇತರ ರೋಗಿಗಳನ್ನು ಆರೋಗ್ಯ ಇಲಾಖೆಯು ನಿರ್ಲಕ್ಷ್ಯ ಮಾಡಿದೆ ಎಂದು ಶಿವಾನಂದ ಪಾಟೀಲ್ ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News