ದ.ಕ. ಜಿಲ್ಲೆ : ಕೋವಿಡ್‌ಗೆ ಮೂವರು ಬಲಿ, 136 ಮಂದಿಗೆ ಕೊರೋನ ಸೋಂಕು

Update: 2020-10-24 15:58 GMT

ಮಂಗಳೂರು, ಅ.24: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮತ್ತೆ ಮೂವರು ಮೃತಪಟ್ಟಿದ್ದಾರೆ. ಈ ನಡುವೆ ಶನಿವಾರ 136 ಮಂದಿಗೆ ಸೋಂಕು ತಗುಲಿದ್ದು, 300 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 660ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ 29,401 ಸೋಂಕಿತರ ಪೈಕಿ 26,125 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 2,616 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News