ಸುಲಭ ಗುರಿ ಬೆನ್ನಟ್ಟಲು ವಿಫಲವಾದ ಹೈದರಾಬಾದ್: ರಾಹುಲ್ ಪಡೆಗೆ ರೋಚಕ ಗೆಲುವು

Update: 2020-10-24 18:18 GMT

ದುಬೈ: ಉತ್ತಮ ಆರಂಭ ಪಡೆದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯದಿಂದಾಗಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 12 ರನ್ ಗಳಿಂದ ಸೋತಿದೆ.

ಗೆಲುವಿಗೆ 127 ರನ್ ಸುಲಭ ಗುರಿ ಪಡೆದ ಹೈದರಾಬಾದ್ 19.5 ಓವರ್ ಗಳಲ್ಲಿ 114 ರನ್ ಗೆ ಆಲೌಟಾಗಿ ಸೋಲೊಪ್ಪಿಕೊಂಡಿತು. ಕೊನೆಯ ಎರಡು ಓವರ್ ಗಳಲ್ಲಿ ಹೈದರಾಬಾದ್ ಗೆಲುವಿಗೆ 17 ರನ್ ಅಗತ್ಯವಿತ್ತು. ಆದರೆ 4 ರನ್ ಗಳಿಸಲಷ್ಟೇ ಶಕ್ತವಾಯಿತು.

ಹೈದರಾಬಾದ್ ಪರ ಡೇವಿಡ್ ವಾರ್ನರ್ 35, ವಿಜಯ ಶಂಕರ್ 26 ರನ್ ಗಳಿಸಿದರು. ಪಂಜಾಬ್ ಪರ ಅರ್ಶದೀಪ್ ಸಿಂಗ್ ಹಾಗೂ ಕ್ರಿಸ್ ಜೋರ್ಡನ್ ತಲಾ 3 ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 126 ರನ್ ಗಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News