ಸರಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ : ಶಾಸಕ ಕಾಮತ್

Update: 2020-10-25 06:39 GMT

ಮಂಗಳೂರು, ಅ. 25 : ಬಿಜೆಪಿ ಕೊಡಿಯಾಲ್ ಬೈಲ್ ವಾರ್ಡ್, ಎಸ್ಸಿ ಮೋರ್ಚಾ ಹಾಗೂ ಯುವಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ಒನ್ ಸಹಯೋಗದೊಂದಿಗೆ ಆಯುಷ್ಮಾನ್ ಭಾರತ್ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವು ವಿವೇಕನಗರದಲ್ಲಿ ಜರುಗಿತು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಯುಷ್ಮಾನ್ ಭಾರತ್ ಕಾರ್ಡ್ ಮೂಲಕ ದೇಶದ ಕಟ್ಟಕಡೆಯ ನಾಗರಿಕರಿಗೂ ಆರೋಗ್ಯ ಸೌಲಭ್ಯ ತಲುಪುವ ಉದ್ದೇಶದಿಂದ ಜಾರಿಗೊಳಿಸಿರುವ ಈ ಯೋಜನೆಯನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ಮೇಯರ್ ದಿವಾಕರ್ ಪಾಂಡೇಶ್ವರ, ಕಾರ್ಪೊರೇಟರ್‌ಗಳಾದ ಸುಧೀರ್ ಶೆಟ್ಟಿ, ಕದ್ರಿ ಮನೋಹರ್ ಶೆಟ್ಟಿ, ಲೀಲಾವತಿ ಪ್ರಕಾಶ್, ಮಾಜಿ ಸಚಿವರಾದ ಕೃಷ್ಣ ಜೆ ಪಾಲೆಮಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಎಸ್ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಯುವಮೋರ್ಚಾ ಅಧ್ಯಕ್ಷ ಸಚಿನ್ ‌ರಾಜ್, ಗೋಪಾಲ್ ರೈ, ಪ್ರಶಾಂತ್ ಆಳ್ವ, ಜಯರಾಜ್ ಶೆಟ್ಟಿ, ಮೇಘರಾಜ್ ಬಲ್ಲಾಳ್ ‌ಭಾಗ್, ಉದ್ಯಮಿ ಗಣೇಶ್ ಶೆಟ್ಟಿ, ಸತ್ಯಸಾರಮಾಣಿ ದೈವಸ್ಥಾನದ ಅಧ್ಯಕ್ಷ ಅಜಿತ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News