×
Ad

ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರೊಂದಿಗೆ ಸಿದ್ದರಾಮಯ್ಯ ಮಾತುಕತೆ

Update: 2020-10-25 12:46 IST

ಬೆಂಗಳೂರು : ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿಗೆ ಭೇಟಿ ನೀಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಮುಡಬಿ, ಕಲಖೋರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು.

ಪ್ರವಾಹದಿಂದ ಬೆಳೆ ಕಳೆದುಕೊಂಡಿರುವ ರೈತರೊಂದಿಗೆ ಮಾತುಕತೆ ನಡೆಸಿ, ಅವರ ಅಹವಾಲು ಆಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಮಾಜಿ ಸಚಿವರಾದ ರಾಹಶೇಖರ ಪಾಟೀಲ್, ರಹೀಂ ಖಾನ್, ವಿಧಾನಸಭೆ ವಿರೋಧ ಪಕ್ಷದ ಸಚೇತಕರಾದ ಡಾ. ಅಜಯಸಿಂಗ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಶರಣಪ್ಪ ಮಟ್ಟೂರು ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News