ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಆಸ್ಪತ್ರೆಯಿಂದ ಬಿಡುಗಡೆ

Update: 2020-10-25 12:35 GMT

ಹೊಸದಿಲ್ಲಿ, ಅ.25: ಎದೆನೋವಿನಿಂದ ಅಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿದ್ದ ಭಾರತದ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ರವಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಗುರುವಾರ ಎದೆನೋವು ಕಾಣಿಸಿಕೊಂಡಿದ್ದರಿಂದ ಕಪಿಲ್ ದೇವ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರು ಆರೋಗ್ಯದಿಂದಿದ್ದು, ಇಂದು ಮಧ್ಯಾಹ್ನ ಬಿಡುಗಡೆ ಆಗಿದ್ದಾರೆ. 

ದೇಶದ ಅತ್ಯುತ್ತಮ ಕ್ರಿಕೆಟ್ ಆಟಗಾರರಲ್ಲಿ ಒಬ್ಬರಾಗಿರುವ ಕಪಿಲ್ ದೇವ್ 1983ರ ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದರು. ಅವರು 131 ಟೆಸ್ಟ್ ಹಾಗೂ 225 ಏಕದಿನ ಪಂದ್ಯಗಳನ್ನಾಡಿದ್ದು, ಟೆಸ್ಟ್ ನಲ್ಲಿ 434 ವಿಕೆಟ್ ಪಡೆದು, 5 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ರಾಷ್ಟ್ರೀಯ ತಂಡದ ತರಬೇತುದಾರರಾಗಿಯೂ ಸೇವೆ ಸಲ್ಲಿಸಿರುವ ಕಪಿಲ್ ದೇವ್, 2010ರಲ್ಲಿ ಐಸಿಸಿ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News