ಕೋವಿಡ್19: ಉಡುಪಿಯಲ್ಲಿಂದು 118 ಮಂದಿಗೆ ಪಾಸಿಟಿವ್

Update: 2020-10-25 13:33 GMT

ಉಡುಪಿ, ಅ.25: ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 118 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಅಲ್ಲದೇ ಇಂದು 175 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 118 ಮಂದಿಯಲ್ಲಿ ಮಕ್ಕಳು ಸೇರಿದಂತೆ 74 ಮಂದಿ ಪುರುಷರು ಹಾಗೂ 44 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 58 ಪುರುಷರು ಹಾಗೂ 32 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 58, ಕುಂದಾಪುರ ತಾಲೂಕಿನ 25 ಹಾಗೂ ಕಾರ್ಕಳ ತಾಲೂಕಿನ 34 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇನ್ನೊಬ್ಬರು ಹೊರಜಿಲ್ಲೆಯಿಂದ ಚಿಕಿತ್ಸೆಗೆಂದು ಬಂದು ಇಲ್ಲಿ ಪಾಸಿಟಿವ್ ಬಂದವರಾಗಿದ್ದಾರೆ ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 118 ಮಂದಿಯಲ್ಲಿ 23 ಮಂದಿಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿದರೆ, ಉಳಿದ 95 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆುುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

175 ಮಂದಿ ಗುಣಮುಖ: ರವಿವಾರ ಒಟ್ಟು 175 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 20,102 ಆಗಿದೆ. ಜಿಲ್ಲೆಯಲ್ಲಿ ಸದ್ಯ 1257 ಸಕ್ರೀಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.

2710 ನೆಗೆಟಿವ್: ಜಿಲ್ಲೆಯಲ್ಲಿ ಶನಿವಾರ ಒಟ್ಟು 2816 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 2710 ಮಂದಿ ನೆಗೆಟಿವ್ ಬಂದಿದ್ದು, 106 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,524 ಆಗಿದೆ.

ಜಿಲ್ಲೆಯಲ್ಲಿ ಶನಿವಾರ ಒಟ್ಟು 2816 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 2710 ಮಂದಿ ನೆಗೆಟಿವ್ ಬಂದಿದ್ದು, 106 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,524 ಆಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,70,583 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,49,059 ಮಂದಿ ನೆಗೆಟಿವ್ ಹಾಗೂ 21,524 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 20,102 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಟ್ಟು 178 ಮಂದಿ ಮೃತಪಟ್ಟಿದ್ದಾರೆ.

ರವಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾರೊಬ್ಬರೂ ಮೃತ ಪಟ್ಟಿಲ್ಲ. ಇದರಿಂದ ಈವರೆಗೆ ಕೋವಿಡ್‌ನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 178 ಆಗಿದೆ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News