ಎಂಪಿಎಂ ಕಾರ್ಖಾನೆಗೆ ನೀಡಿದ್ದ ಅರಣ್ಯ ಭೂಮಿ ವಾಪಾಸ್ ನೀಡಲು ಒತ್ತಾಯಿಸಿ ಸಿಎಂಗೆ ಮನವಿ

Update: 2020-10-25 13:57 GMT

ಶಿವಮೊಗ್ಗ: ಎಂಪಿಎಂ ಕಾರ್ಖಾನೆಗೆ ನೀಡಿದ್ದ 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಈ ಕೂಡಲೇ ವಾಪಾಸ್ ಪಡೆಯಬೇಕು ಎಂದು ನಮ್ಮೂರಿಗೆ ಆಕೇಶಿಯ ಮರ ಬೇಡ ಹೋರಾಟ ಒಕ್ಕೂಟದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಗೆ ಪಶ್ಚಿಮಘಟ್ಟದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಸುಮಾರು 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು 40 ವರ್ಷಗಳ ಅವಧಿಗೆ ಲೀಸ್‌ಗೆ ನೀಡಲಾಗಿತ್ತು. ಆದರೆ ಲೀಸ್ ನೀಡಿದ್ದ ಅವಧಿ 2020ರ ಆಗಸ್ಟ್ ವೇಳೆಗೆ ಅಂತ್ಯವಾಗಿದೆ. ಹಾಗಾಗಿ ಸರ್ಕಾರ ಆ ಭೂಮಿಯನ್ನು  ವಾಪಾಸ್ ಪಡೆದು ಅರಣ್ಯ ಇಲಾಖೆಗೆ ನೀಡಬೇಕು ಎಂದು ಮುಖ್ಯಮಂತ್ರಿಗೆ ಸಂಘಟನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರಾದ ಶ್ರೀಪಾಲ್, ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಗುರುಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News