ದ.ಕ. ಜಿಲ್ಲೆಯಲ್ಲಿಂದು 139 ಮಂದಿಗೆ ಕೊರೋನ ಸೋಂಕು: 3 ಮಂದಿ ಮೃತ್ಯು

Update: 2020-10-25 15:02 GMT

ಮಂಗಳೂರು, ಅ.25: ದ.ಕ. ಜಿಲ್ಲೆಯಲ್ಲಿ ರವಿವಾರ 139 ಮಂದಿಗೆ ಕೊರೋನ ಸೋಂಕು ತಗುಲಿದ್ದು, 3 ಮಂದಿ ಮೃತಪಟ್ಟಿದ್ದಾರೆ. 211 ಮಂದಿ ಗುಣಮುಖರಾಗಿದ್ದಾರೆ.

ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 2,45,373 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 2,15,833 ಮಂದಿಯ ವರದಿ ನೆಗೆಟಿವ್ ಮತ್ತು 29,540 ಮಂದಿಯ ವರದಿ ಪಾಸಿಟಿವ್ ಬಂದಿದೆ. ಅಲ್ಲದೆ ಒಟ್ಟು 663 ಮಂದಿ ಸಾವಿಗೀಡಾಗಿದ್ದಾರೆ.  26,336 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 2,541 ಸಕ್ರಿಯ ಪ್ರಕರಣಗಳಿವೆ. 

ಮಾಸ್ಕ್; 9550 ಪ್ರಕರಣ

ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 9,550 ಪ್ರಕರಣ ದಾಖಲಿಸಲಾಗಿದ್ದು,10,82,005 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News