ನಿಮ್ಮ ಪ್ರೀತಿ ವಿಶ್ವಾಸವನ್ನು ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

Update: 2020-10-25 16:54 GMT

ಬೆಂಗಳೂರು ಅ. 25: 'ನಾನು ನಿಮ್ಮ ಸೇವೆ ಮಾಡಲು ಬಯಸಿದ್ದು, ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದಿಗೂ ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ' ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ತಿಳಿಸಿದ್ದಾರೆ.

ರವಿವಾರ ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನಲೆಯಲ್ಲಿ ಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜತೆ ಪ್ರಚಾರ ನಡೆಸಿದರು.

'ಕ್ಷೇತ್ರದ ಜನರಿಗೆ ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಹಾಗೂ ರಾಜರಾಜೇಶ್ವರಿ ತಾಯಿ ಆಶೀರ್ವಾದಿಸಿ ಆಯುಷ್ ಆರೋಗ್ಯ, ಐಶ್ವರ್ಯ ಕರುಣಿಸಲಿ. ನಾನು ಯಾವುದೇ ದುರಾಲೋಚನೆ ಇಟ್ಟುಕೊಂಡು ಈ ಚುನಾವಣೆಗೆ ಬಂದಿಲ್ಲ. ನಿಮ್ಮ ಸೇವೆಗೆ ನಾನು ಬಂದಿದ್ದೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ನನ್ನ ಕೈಲಾದ ಪ್ರಯತ್ನ ಪಡುತ್ತೇನೆ. ನೀವು ಕೊಡುವ ಮತವನ್ನು ಮಾರಿಕೊಳ್ಳುವುದಿಲ್ಲ. ನಿಮ್ಮ ನೋವು, ದುಃಖದಲ್ಲಿ ನಿಮ್ಮ ಮನೆ ಮಗಳಂತೆ ಜೊತೆಗಿರುತ್ತೇನೆ. ನಿಮ್ಮ ಮಗಳಿಗೆ ನೀಡುವ ಪ್ರೋತ್ಸಾಹವನ್ನೇ ನನಗೂ ನೀಡಿ. ನವೆಂಬರ್ 3 ರಂದು ನಡೆಯುವ ಚುನಾವಣೆಯಲ್ಲಿ ಕ್ರಮಸಂಖ್ಯೆ ಒಂದು ಹಸ್ತದ ಗುರುತಿಗೆ ಮತ ಹಾಕಿ ಎಂದು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News