ಮೈಸೂರು ದಸರಾ: ಮುಖ್ಯಮಂತ್ರಿಯಿಂದ ನಂದಿ ಧ್ವಜಕ್ಕೆಪೂಜೆ ಸಲ್ಲಿಕೆ

Update: 2020-10-26 10:20 GMT

ಮೈಸೂರು, ಅ.26: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಸಂಪ್ರದಾಯದಂತೆ ಸೋಮವಾರ ಅಪರಾಹ್ನ 2:59ಕ್ಕೆ ನಗರದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರಿರುವ ನಂದಿ ಧ್ವಜಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಮ್ಮ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ದಸರಾ ಆಚರಣೆ ಈ ಬಾರಿ ಸರಳವಾಗಿ ನಡೆಯುತ್ತಿದೆ. ನಾಡಿನ ಜನ ಸಂಕಷ್ಟದಲ್ಲಿದ್ದು, ಮುಂದಿನ ದಿನಗಳಲ್ಲಿ ಅದರಿಂದ ಮುಕ್ತಗಿ ವಿಜಯ ಸಾಧಿಸುವ ಕಾಲ  ಸನ್ನಿಹಿತವಾಗಿದ್ದು, ಈ ನಿಟ್ಟಿನಲ್ಲಿ ತಾಯಿ ಶ್ರೀಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಇದೇ ವೇಳೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವ ಸಿ‌.ಟಿ.ರವಿ, ಮೇಯರ್ ತಸ್ನೀಂ, ಸಂಸದ ಪ್ರತಾಪ್ ಸಿಂಹ, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್‌.ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News