ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ಸರಕಾರ ಸಂಪೂರ್ಣ ವಿಫಲ: ಸಿದ್ದರಾಮಯ್ಯ

Update: 2020-10-26 10:37 GMT

ಕಲಬುರಗಿ, ಅ.26: ಭೀಕರ ಪ್ರವಾಹದಿಂದ ಹಾನಿಗಿಡಾದ ಅಫ್ಝಲ್ ಪುರ ತಾಲೂಕಿನ ಸರಡಗಿ ಬ್ರಿಡ್ಜ್, ಜೇವರ್ಗಿ ತಾಲೂಕಿನ ಕೋನ ಹಿಪ್ಪರಗ ಬ್ರಿಡ್ಜ್, ಕಟ್ಟಿ ಸಂಗಾವಿ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.

ಬಳಿಕ ಕಲಬುರಗಿ ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಪ್ರವಾಹ ನಿಭಾಯಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು.

 ಈ ಸಂದರ್ಭದಲ್ಲಿ ಜೇವರ್ಗಿಯ ಶಾಸಕ ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್,  ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗದೇವ್ ಗುತ್ತೇದಾರ್, ಕಲಬುರಗಿ ಜಿಲ್ಲೆಯ ಶಾಸಕ ಎಂ.ವೈ. ಪಾಟೀಲ್, ಕನೀಜ್ ಫಾತಿಮಾ, ಶಹಪುರನ ಶಾಸಕರಾದ ಶರಣಬಸಪ್ಪ ದರ್ಶನಾಪುರ್, ಮುಖಂಡರಾದ ಬಿ.ಆರ್. ಪಾಟೀಲ್, ಶರಣ ಪ್ರಕಾಶ ಪಾಟೀಲ್, ತಿಪ್ಪಣಪ್ಪ ಕಮಕನೂರ್, ಅಲ್ಲಮ ಪ್ರಭು ಪಾಟೀಲ್, ಚಂದ್ರಶೇಖರ್ ಪಾಟೀಲ್ ಹುಮ್ನಾಬಾದ್, ವಿಜಯ್ ಜಿ. ರಾಮಕೃಷ್ಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News